ನಮಸ್ಕಾರ ಸ್ನೇಹಿತರೇ,
ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರಿಗೆ ಜೈಲಿನಲ್ಲಿ ರಾಜತಿತ್ಯ ಸಿಗುತ್ತಿದೆ. ಜೈಲಿನಲ್ಲಿ ಅವರಿಗೆ ಕೇಳಿದ್ದನೆಲ್ಲ ಕೊಡುತ್ತಾ ಇದ್ದಾರೆ, ಜೈಲಿನಲ್ಲಿ ಇರುವ ಕೈದಿಗಳ ಮೂಲಕ ತುಂಬಾನೇ ಸೌಲಭ್ಯಗಳು ಸಿಗುತ್ತಿದೆ ಎಂಬ ಮಾತು ಕೇಳಿ ಬರುತ್ತಾ ಇತ್ತು. ಇದರ ಬಗ್ಗೆ ಇದೀಗ ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟಣೆಯೊಂದನ್ನ ಕೊಟ್ಟಿದ್ದಾರೆ
ನಟ ದರ್ಶನ್‌ಗೆ ರಾಜಾತೀಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಅತೀಥ್ಯ ನೀಡಿಲ್ಲ. ಜೈಲಿನಲ್ಲಿರುವ ಎಲ್ಲರಂತೆಯೇ ದರ್ಶನ್‌ಗೆ ವ್ಯವಸ್ಥೆ ಇದೆ. ಬಿರಿಯಾನಿ ಕೊಟ್ಟರು ಎಂದು ಕೆಲವರು ಆರೋಪಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು ಎಂದರು. ಹೈ ರೆಸ್ಯೂಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್‌ನಿಂದ ಹೊರಗು ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್‌ಗೆ ಇಳಿಸಲಾಗಿದೆ. ಜಾಮರ್‌ಗಳನ್ನು ತೆಗೆಯುವುದಿಲ್ಲ ಎಂದು ತಿಳಿಸಿದರು.
- ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್, 30,000 ದಿಂದ 50,000 ವರೆಗೆ ಸಿಗಲಿದೆ, Good news For all Karnataka Womens, ಅರ್ಜಿ ಸಲ್ಲಿಸಿದ್ರೆ ಮಾತ್ರ ಸಿಗಲಿದೆ, Government New Scheme.
- ಟೈಲರಿಂಗ್ ಉದ್ಯಮ ಸ್ಟಾರ್ಟ್ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ, Government Scheme, ಉಚಿತ ಟೈಲರಿಂಗ್ ತರಬೇತಿ ಜೊತೆಗೆ ಉಚಿತ ಹೊಲಿಗೆ ಯಂತ್ರ, Free Sewing Machine Scheme
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವಾ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸ್ಯೂಲೇಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು
ಇಲಾಖೆಯಲ್ಲಿ ಬದಲಾವಣೆಯನ್ನು ತರಲು ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಸನ್ನಡತೆಯ ಬಿಡುಗಡೆ ಹೊಂದಿರುವ ಸತೀಶ್ ಎಂಬಾತ ‘ತಾನು ಕಾನೂನು ಡಿಪ್ಲೋಮಾ ಮುಗಿಸಿದ್ದೇನೆ. ಹೊರಗಡೆ ಹೋದಾಗ ಜೀವನಕ್ಕೆ ಉಪಯೋಗವಾಗುತ್ತದೆ’ ಎಂದು ಹೇಳಿದ್ದಾನೆ. ಬಹಳ ಜನ ಪರಿವರ್ತನೆ ಹೊಂದಲು ಇಂತಹ ಅವಕಾಶ ಕಲ್ಪಿಸಿಕೊಡುತ್ತೇವೆ. ಕಾರ್ಪೆಂಟರ್, ಎಲೆಕ್ಟ್ರಿಕ್ ಕೆಲಸ, ಕಂಪ್ಯೂಟರ್ ತರಬೇತಿ ಕಲಿಸಿಕೊಡುತ್ತೇವೆ. ಕೈದಿಗಳು ಬದಲಾವಣೆ ಹೊಂದಲು ಅವಕಾಶವಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರರವರು ಹೇಳಿದರು.
ಳಹಂತದ ಅಧಿಕಾರಿಗಳು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದಾರೆ. ಅಂತವರು ಅಕ್ರಮಗಳಿಗೆ ಕೈಜೋಡಿಸುತ್ತಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದೆಲ್ಲವು ನನ್ನ ಗಮನಕ್ಕೆ ಇದೆ. ಬೇರೆಡೆ ವರ್ಗಾವಣೆಯಾದವರು ಮತ್ತೇ ಅದೇ ಸ್ಥಳಕ್ಕೆ ಮರು ವರ್ಗಾವಣೆಯಾಗಿಲ್ಲ. ನಾನೇ ವರ್ಗಾವಣೆ ಮಾಡುವುದರಿಂದ, ಅಂತಹ ಒಂದು ನಿದರ್ಶನವನ್ನು ತೋರಿಸಿ. ಇದು ಸಾಧ್ಯವೇ ಇಲ್ಲ. ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ತರಲು ಕೆಲವು ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
Darshan, Dboss in Jail, Darshan Thoogudeepa, Renukaswamy Murder Case, Darshan and Pavitra Gowda